
ಸಿಲಿಕಾನ್ ಸಿಟಿ ಬೆಂಗಳೂರಿನ ಜನರು ಈಗಾಗಲೇ ಮಳೆಯಿಂದ ಸಾಕಷ್ಟು ಪರದಾಟ ನಡೆಸಿದ್ದಾರೆ. ಈ ಬೆನ್ನಲ್ಲೇ ಇಂದು ಸೇರಿ ಇನ್ನೂ ನಾಲ್ಕು 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಲ್ಲರಿಗೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಸದ್ಯ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.
Poll (Public Option)

Post a comment
Log in to write reviews