
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
ಇನ್ನು ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗುಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
Poll (Public Option)

Post a comment
Log in to write reviews