ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಯು ಭಾರೀ ಅನಾಹುತವನ್ನುಂಟು ಮಾಡಿದೆ. ಬೆಂಗಳೂರು ನಗರದ ಬಿನ್ನಿಪೇಟೆಯಲ್ಲಿ ಕಾಂಪೌಂಡ್ ಕುಸಿದಿದ್ದು, ಹತ್ತಾರು ಗಾಡಿಗಳು ಜಖಂಗೊಂಡಿವೆ. ನಾಲ್ಕೈದು ಮನೆಗಳಿಗೆ ನೀರು ನುಗ್ಗಿದೆ. ಕಾಂಪೌAಡ್ ಕುಸಿತ ಪರಿಣಾಮ 16 ಮನೆಗಳಿಗೆ ಜಲದಿಗ್ಬಂಧನ ಉಂಟಾಗಿದೆ.ಎಡೆಬಿಡದೆ ಸುರಿದ ಮಳೆಗೆ ಕೆ.ಆರ್. ಮಾರ್ಕೆಟ್ನ ರಸ್ತೆಯೆಲ್ಲಾ ಜಲಾವೃತ್ತವಾಗಿತ್ತು. ಇನ್ನೂ ಮಲ್ಲೇಶ್ವರಂ ಸ್ಯಾಂಕಿ ರಸ್ತೆಯಲ್ಲಿ ನೀರು ನಿಂತು ಅಕ್ಷರಶಃ ಜನರು ನಲುಗಿ ಹೋದರು. ವಾಹನ ಸವಾರರು ಪರದಾಡಿದರು. ಮಳೆಯಿಂದಾಗಿ ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಆಗಿತ್ತು. ಇಂದೂ ಸಹ ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಭಾರೀ ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಅ.10 ಭಾರೀ ಮಳೆಯಾಗಬಹುದು. ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ.
Post a comment
Log in to write reviews