
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ, ಉಡುಪಿ, ಮಂಗಳೂರು, ಉತ್ತರ ಕನ್ನಡ ,ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಮಲೆನಾಡು ಪ್ರದೇಶ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಕರ್ರನಾಟಕದ ಮದ್ಯ ಭಾಗದಲ್ಲಿ ಸಾಧರಣ ಮಳೆಯಾಗಲಿದೆ ಎಂಬ ಸೂಚನೆ ನೀಡಿದೆ. ಇಂದು (ಜೂನ್ 15)ಬೆಂಗಳೂರಲ್ಲಿ ಮಳೆ ಪ್ರಮಾಣ ತೀರಾ ಕಡಿಮೆ ಇದ್ದುಮೋಡಗಳು ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
Poll (Public Option)

Post a comment
Log in to write reviews