
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿ ಗುಡುಗು, ಸಿಡಿಲಿನ ಅಬ್ಬರಕ್ಕೆ 106 ಕುರಿಗಳು ಬಲಿಯಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದಲ್ಲಿ ಶುಕ್ರವಾರ (ಆಗಸ್ಟ್ 16) ರಾತ್ರಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಗ್ರಾಮದ ಆಂಜನೇಯವರ ಅವರಿಗೆ ಸೇರಿದ 90 ಹಾಗೂ ಓಬಣ್ಣ ಎಂಬುವವರಿಗೆ ಸೇರಿದ 16 ಕುರಿಗಳು ಸೇರಿದಂತೆ ಒಟ್ಟು 106 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಇನ್ನು ಘಟನಾ ಜಾಜೂರು ಗ್ರಾಮಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರಿಕ್ಷೆ ನಡೆಸಿದರು. ಅನುಗ್ರಹ ಯೋಜನೆಯಡಿ ಪರಿಹಾರಕ್ಕೆ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಸಹಾಯಕ ನಿರ್ದೇಶಕ ಡಾ.ರೇವಣ್ಣ ಮಾಹಿತಿ ನೀಡಿದರು. ಜಾಜೂರು ಗ್ರಾಮಕ್ಕೆ ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಆರ್‌ಐ ರಾಜೇಶ್ ಗ್ರಾಮಲೆಕ್ಕಿಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Poll (Public Option)

Post a comment
Log in to write reviews