
ಉತ್ತರಾಖಂಡದ ಸಿರೋಬಗಢ ಗುಡ್ಡಗಾಡು ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಹಾಗೆಯೇ ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದೆ.
ಸಿರೋಬಗಢ ಬಳಿ ಭೂಕುಸಿತ ಸಂಭವಿಸಿರುವುದರಿಂದ ಬದರಿನಾಥ-ರಿಷಿಕೇಶ ಹೆದ್ದಾರಿ ಬಂದ್ ಮಾಡಲಾಗಿದೆ. ತಡರಾತ್ರಿಯ ನಿರಂತರ ಮಳೆಯಿಂದಾಗಿ, ರುದ್ರಪ್ರಯಾಗ ಮತ್ತು ಪೌರಿ ಜಿಲ್ಲೆಗಳ ಗಡಿಯಲ್ಲಿರುವ ಸಿರೋಬಗಢ ಬಳಿ ಬೆಟ್ಟದಿಂದ ಕಲ್ಲುಗಳು ಹೆದ್ದಾರಿಗೆ ಕುಸಿಯುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಇದರ ಪರಿಣಾಮ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
Tags:
Poll (Public Option)

Post a comment
Log in to write reviews