
ಪುಣೆ: ಮುಂಬೈನಲ್ಲಿ ಬುಧವಾರ ಸಂಜೆ ಮಳೆ ಶುರುವಾಯಿತು. ಭಾರಿ ಮಳೆಯ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಮುಂಬೈನಲ್ಲಿ ಭಾರೀ ಮಳೆ. ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಘೋಷಿಸಿ. ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಪ್ರಯಾಣಿಕರು ರಸ್ತೆ ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಕಾಯುವಂತ ಪರಿಸ್ಥತಿ ಎದುರಾಗಿದ್ದು. 45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ನುಲ್ಲಾದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣ್‌ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಹವಾಮಾನ ಇಲಾಖೆ ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆಗಳು ಇವೆ ಎಂದು ತಿಳಿಸಿದೆ
ಪುಣೆಯ ಶಿವಾಜಿನಗರದಲ್ಲಿ. ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ. , ಮುಂದಿನ 24 ಗಂಟೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿ. ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಪುಣೆ ನಗರದಲ್ಲಿ ಭಾರೀ ಮಳೆ ಅಸ್ತವ್ಯಸ್ತವಾದ ಜನ ಜೀವನ. ಜಲಾವೃತಗೊಂಡ ಹಲವು ರಸ್ತೆಗಳು
Poll (Public Option)

Post a comment
Log in to write reviews