2024-12-24 06:37:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯದಲ್ಲಿ ಮಳೆ ಅಬ್ಬರ : ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಮಳೆ ಸುರಿಯುತ್ತಿರುವುದರಿಂದ ಇನ್ನೂ ಎರಡು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಇನ್ನು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆ.22ರಿಂದ ಆ.24ರ ವರೆಗೆ ಮಳೆ ಇರುವುದಿಲ್ಲ. 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಗರದಲ್ಲಿ ಕಳೆದ ಒಂದು ವಾರದಿಂದ ಸಂಜೆ ವೇಳೆಗೆ ಮಳೆ ಸುರಿಯುತ್ತಿದೆ. ರಾಜಧಾನಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Post a comment

No Reviews