
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರಣಿ ಮಳೆ ಅಬ್ಬರ ಹಿನ್ನಲೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳ ಕಂಡಿದೆ. ಕಳೆದ ನಾಲ್ಕೈದು ತಿಂಗಳಿಂದ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಒಳ ಹರಿವು ತೀವೃ ಕುಸಿತ ಕಂಡಿತ್ತು. ಇದರಿಂದ ರೈತರು ನೀರಿಲ್ಲದೆ ಪರದಾಡವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಕಳೆದ ನಾಲ್ಕೈದು ದಿನಗಳಿಂದ ಭರಣಿಯ ಅಬ್ಬರದಿಂದ 950 ಕ್ಯೂಸೆಕ್ ಡ್ಯಾಂ ನ ಒಳಹರಿವು ಹೆಚ್ಚಿದೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೂ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಡ್ಯಾಂ ನ ಒಳಹರಿವು ಇನ್ನೂ ಹೆಚ್ಚಾಗಲಿದೆ.
Tags:
Poll (Public Option)

Post a comment
Log in to write reviews