
ಸಿಲಿಕಾನ್ ಸಿಟಿಯಲ್ಲಿ ದಿನ ದಿನದಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇನ್ನೂ ಈ ಮಧ್ಯೆ ಹೆಬ್ಬಾಳ ಟ್ರಾಫಿಕ್ಗೆ ಮುಕ್ತಿ ಕೊಡುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಹಾಗೂ ಆಯುಕ್ತರಿಂದ ಹೆಬ್ಬಾಳ ಮೇಲುಸೇತುವೆಯ ಕಾಮಗಾರಿಯ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು ಹೆಬ್ಬಾಳ ಟ್ರಾಫಿಕ್ ಶೀಘ್ರ ಮುಕ್ತಿಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಿರ್ಮಿಸುತ್ತಿರುವ ಹೆಬ್ಬಾಳ ಮೇಲುಸೇತುವೆಯ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ಈ ಭಾಗದಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆಯಿಂದ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಮೇಲ್ ಸೇತುವೆಯ ಕಾಮಗಾರಿಯನ್ನು ಅತಿ ಶೀಘ್ರದಲ್ಲೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
Poll (Public Option)

Post a comment
Log in to write reviews