
ಮಹಾರಾಷ್ಟ್ರ: ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬವ್ಧಾನ್ ಬುದ್ರುಕ್ ಗ್ರಾಮದ ಬಳಿ ನಡೆದಿದೆ.
ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಗಾಬರಿಯಾದ ಗ್ರಾಮಸ್ಥರು ಕೂಡಲೇ ಹಿಂಜೆವಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ವೈದ್ಯಕೀಯ ತಂಡ ಕೂಡಲೇ ಧಾವಿಸಿದೆ. ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ.
ಬೆಳಗ್ಗೆ 7:00 ರಿಂದ 7:10 ರ ನಡುವೆ ದುರ್ಘಟನೆ ಸಂಭವಿಸಿದೆ. ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ. ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದಿಂದಾಗಿ ಹೆಲಿಕಾಪ್ಟರ್‌ಗೆ ತೀವ್ರ ಹಾನಿಯಾಗಿದೆ. ಪತನಗೊಂಡ ಬಳಿಕ ಬೆಂಕಿ ಹೊತ್ತಿಕೊಂಡಿದೆ. ಪೈಲಟ್ ಆನಂದ್ ಟೇಕ್ ಆಫ್ ಮಾಡಿದ್ದರು.
Poll (Public Option)

Post a comment
Log in to write reviews