ಟಾಪ್ 10 ನ್ಯೂಸ್
ಇನ್ಮುಂದೆ ಮಹಿಳೆಯವರಿಗೆ ಮಾತ್ರವಲ್ಲ, ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ನೀಡುತ್ತಿದ್ದು ಇದೀಗ ಮಹಿಳೆಯರಿಗೆ ಮಾತ್ರವಲ್ಲದೆ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ ನೀಡುತ್ತೇವೆಂದು ರಾಜ್ಯ ಸರ್ಕಾರ ಘೋಷಿಸಿದೆ.
ಈಗಾಗಲೇ 1.24 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ ಹಲವು ಮಂದಿ ಮಹಿಳೆಯರು 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣ ಅವರಿಗೆ ಹಣ ಸಂದಾಯ ಸ್ಥಗಿತ ಮಾಡಲಾಗಿದೆ. ಜೊತೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಣ ವರ್ವಗಾವಣೆಯಾಗಬೇಕಿದೆ.ಇನ್ನೂ ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಈ ತಿಂಗಳಿನಿಂದ ಸಿಗಲಿದ್ದು ಅವರ ಬದುಕಿಗೆ ಈ ಹಣ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
Poll (Public Option)

Post a comment
Log in to write reviews