
ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದರು. 140 ದಿನಗಳ ಬಳಿಕ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಸಲ್ಲ. ಆರೋಗ್ಯ ಎಲ್ಲರ ಹಕ್ಕು ಎಂದು ಅಭಿಪ್ರಾಯಪಟ್ಟು ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು. ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್ ಆದ ನಂತರ ಕೋರ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.
Poll (Public Option)

Post a comment
Log in to write reviews