ಟಾಪ್ 10 ನ್ಯೂಸ್
ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್; ಆದ್ರೆ ಹಾಸನಕ್ಕೆ ಕಾಲಿಡುವಂತಿಲ್ಲ !

ಬೆಂಗಳೂರು: ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದ್ದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆನ್ನಲಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಭವಾನಿ ರೇವಣ್ಣ ಯಾವುದೇ ಕಾರಣಕ್ಕೂ ಹಾಸನಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.
ಒಟ್ಟಾರೆ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ ನಂತರದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ. ಹಾಗಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹೇಳಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Poll (Public Option)

Post a comment
Log in to write reviews