
ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಬಿ ನಾಗೇಂದ್ರಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ರದ್ದು ಕೋರಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಇದೀಗ ಈ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರಗೆ ಹೈಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ.15ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಾಗೇಂದ್ರ ಅವರಿಗೆ ಜಾಮೀನು ನೀಡಿದ್ದು, ಜಾಮೀನು ರದ್ದು ಕೋರಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಬಿ. ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ.
Poll (Public Option)

Post a comment
Log in to write reviews