
ಚಿಕ್ಕಮಗಳೂರು : ಭಾರೀ ಮಳೆಗೆ ಚಾರ್ಮಾಡಿ ಹೆದ್ದಾರಿಯ ಆಲೆಖಾನ್ ತಿರುವಿನ ಸಮೀಪ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿರುವುದು ವರದಿಯಾಗಿದೆ.
ಕೆಲವು ದಿನಗಳ ಹಿಂದಷ್ಟೇ ರಸ್ತೆ, ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು, ಇದೀಗ ಗುಡ್ಡ ಕುಸಿದಿದೆ. ಕಳೆದ ವರ್ಷ ಸುರಿದ ಧಾರಾಕಾರ ಮಳೆಗೆ ಘಾಟಿಯ ರಸ್ತೆಯುದ್ದಕ್ಕೂ ಹತ್ತಾರು ಭಾಗಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗಿತ್ತು. ಪ್ರತಿ ವರ್ಷ ಈ ಭಾಗದಲ್ಲಿ ಸುರಿಯುವ ಧಾರಾಕಾರ ಮಳೆಗೆ ಭೂಕುಸಿತ ಹಾಗೂ ಗುಡ್ಡ ಕುಸಿತ ಸರ್ವೇಸಾಮಾನ್ಯವಾಗಿದೆ. ಆದರೆ ಈ ವರ್ಷ ಮೊದಲ ಮಳೆಯಲ್ಲೇ ಈ ರೀತಿಯ ಅವಘಡ ಸಂಭವಿಸಿದೆ.
ಈ ದಾರಿಯಲ್ಲಿ ಪ್ರತಿನಿತ್ಯ ಸಂಚರಿಸುವ ವಾಹನ ಸವಾರರಲ್ಲಿ ಆತಂಕದ ವಾತಾವರಣ ಮೂಡಿದ್ದು ಮೂಡಿಗೆರೆ ಸಿಪಿಐ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews