
ದೆಹಲಿ: ಮೆಟ್ರೋದಲ್ಲಿ ಇಬ್ಬರು ಪುರುಷರು ಹೊಡೆದಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬ ತನ್ನ ಚಪ್ಪಲಿ ತೆಗೆದು ಬಾಗಿಲ ಬಳಿ ನಿಂತಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ವ್ಯಕ್ತಿ ಚಪ್ಪಲಿಯಿಂದ ವ್ಯಕ್ತಿಯ ಮುಖಕ್ಕೆ ಹೊಡೆದ ನಂತರ ಆ ವ್ಯಕ್ತಿ ಕೋಪಗೊಂಡು ಹಿಂದಕ್ಕೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮೆಟ್ರೋದಲ್ಲಿದ್ದ ಸಹ ಪ್ರಯಾಣಿಕರೊಬ್ಬರು ಇವರಿಬ್ಬರ ಹೊಡೆದಾಟದ ವಿಡಿಯೋ ಸೆರೆಹಿಡಿದು, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.
@Haqikat_Aap_Tak ಎಂಬ ಟ್ವಿಟರ್ ಖಾತೆಯಲ್ಲಿ ಜುಲೈ 30ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಚಪ್ಪಲಿಯಿಂದ ಹಲ್ಲೆ ನಡೆಸುತ್ತಿರುವ ವ್ಯಕ್ತಿ ಮದ್ಯಪಾನ ಮಾಡಿದ್ದು, ಕುಡಿದ ಮತ್ತಿನಲ್ಲಿ ಈ ರೀತಿ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಅಸಭ್ಯವಾಗಿ ವರ್ತಿಸುವವರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ
Poll (Public Option)

Post a comment
Log in to write reviews