2024-12-24 06:16:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹುಬ್ಬಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ: ಛಿದ್ರ ಛಿದ್ರವಾದ ದೇಹಗಳು

ಹುಬ್ಬಳ್ಳಿ: ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಗಳ ದೇಹಗಳು ಛಿದ್ರಗೊಂಡಿದ್ದು, ಸದ್ಯ ಇಬ್ಬರ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅವಘಡ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಸಾವಿನ ಹೆದ್ದಾರಿಗೆ ಮತ್ತೆರಡು ಬಲಿಯಾಗಿದ್ದು, ಈ ಹೆದ್ದಾರಿಯಲ್ಲಿ ಪ್ರತಿದಿನವೂ ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕು. ಹೆದ್ದಾರಿ-1400 ಹಗಲೀಕರಣವಾಗಬೇಕು. ಕಾಮಗಾರಿಗೆ ಚಾಲನೆ ಸಿಕ್ಕಿ ಮೂರು ರ‍್ಷ ಕಳೆದಿದ್ದರೂ, ಇದರಿಂದ ಇನ್ನೂ ಜನರಿಗೆ ಉಪಯೋಗವಾಗಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ದಿನೇ ದಿನೇ ಬಲಿ ಪಡೆದುಕೊಳ್ಳುತ್ತಿದೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Post a comment

No Reviews