
ತುಮಕೂರು: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ (Murder case) ಮಾಡಿರುವ ಘಟನೆ ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ಘಟನೆ ನಡೆದಿದೆ. ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಎಂಬಾತ ಕೊಲೆಯಾದವರು.
ಗಾರೆ ಕೆಲಸಗಾರನಾಗಿದ್ದ ರವಿ ತನ್ನ ಸ್ನೇಹಿತ ಶೆಡ್ಡಿಗೆ ಹೋಗಿದ್ದಾಗ ಕೊಲೆಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಶಿವಕುಮಾರ್ ಹಾಗೂ ರವಿ ಸ್ನೇಹಿತರಾಗಿದ್ದರು. ಸ್ನೇಹಿತ ಶಿವಕುಮಾರ್ ಕರೆದ ಎಂದು ರವಿ ಭಾನುವಾರ ಶೆಡ್ಡಿಗೆ ತೆರಳಿದ್ದ.
ಶಿವಕುಮಾರ್ ಹಾಗೂ ರವಿ ನಡುವೆ ಶೆಡ್‌ನಲ್ಲಿ ಗಲಾಟೆ ನಡೆದಿರುವ ಶಂಕೆ ಇದೆ. ಇಬ್ಬರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿ ರವಿಯ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ತಲೆಯ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ತುಮಕೂರು ಎಎಸ್ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕ ಯಾರೆಂದು ತಿಳಿಯಲು ತನಿಖೆಯನ್ನು ಮುಂದುವರಿಸಿದ್ದಾರೆ.
ಹಾವೇರಿಯಲ್ಲಿ ಶವ ಪತ್ತೆ
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಹಳೆಹೊನ್ನತ್ತಿ ಬಳಿ ಪತ್ತೆಯಾಗಿದೆ. ಚಂದ್ರಪ್ಪ ಹೊಳೆಯಪ್ಪನವರ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews