
ನಿರ್ದೇಶಕಿ ಗೀತು ಮೋಹನ್‌ದಾಸ್ ಜೊತೆಗಿನ ಯಶ್ ಅವರ ಮಹತ್ವಾಕಾಂಕ್ಷೆಯ ಯೋಜನೆ ಟಾಕ್ಸಿಕ್ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭಿಸಲು ಸಜ್ಜಾಗಿದೆ. ಆರಂಭದಲ್ಲಿ ಲಂಡನ್‌ನಲ್ಲಿ ಚಿತ್ರೀಕರಣಕ್ಕೆ ಯೋಜಿಸಲಾಗಿತ್ತು, ಆದರೆ ತಂಡವು ಬೆಂಗಳೂರು, ಮುಂಬೈ ಮತ್ತು ಭಾರತದಾದ್ಯಂತ ಚಿತ್ರೀಕರಣಕ್ಕಾಗಿ ವಿವಿಧ ಸ್ಥಳಗಳನ್ನು ಅಂತಿಮಗೊಳಿಸಿದೆ.
ಚಿತ್ರದ ಫ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಇದಕ್ಕೆ ವ್ಯಾಪಕ ಸಿದ್ಧತೆ ಮತ್ತು ಸೆಟಪ್‌ಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬಹುಭಾಷಾ ಚಿತ್ರವಾದ ಟಾಕ್ಸಿಕ್ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುತ್ತಿದ್ದಂತೆ, ನಿರ್ದೇಶಕರು ತಾರಾ ಬಳಗವನ್ನು ಒಟ್ಟುಗೂಡಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಜೊತೆಯಲ್ಲಿ ಕಿಯಾರಾ ಅಡ್ವಾಣಿ ನಟಿಸುವುದು ಖಚಿತವಾಗಿದೆ ಮತ್ತು ಚಿತ್ರದಲ್ಲಿ ನಯನತಾರಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಜನಿಕಾಂತ್ ನಟನಯ ಕಾಳ ಸಿನಿಮಾದಲ್ಲಿ ದಕ್ಷಿಣ ಭಾರತಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ಚಿತ್ರರಂಗದ ಪ್ರಭಾವಶಾಲಿ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಹುಮಾ ಖುರೇಷಿ ಟಾಕ್ಸಿಕ್ ತಂಡ ಸೇರಲು ಸಿದ್ಧರಾಗಿದ್ದಾರೆ. 2023 ರ ತರ್ಲಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡ ಹುಮಾ, ಪೂಜಾ ಮೇರಿ ಜಾನ್ ಚಿತ್ರೀಕರಣವನ್ನು ಮುಗಿಸಿದ್ದಾರೆ. ಅವರು ಸದ್ಯ ಜಾಲಿ ಎಲ್‌ಎಲ್‌ಬಿ 3 ಮತ್ತು ಗುಲಾಬಿ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
Poll (Public Option)

Post a comment
Log in to write reviews