ಭುವನೇಶ್ವರ/ಕೋಲ್ಕತ್ತಾ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ
ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.ಮತ್ತು ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್ಸಿಂಗ್ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.
ಡಾನಾ ಚಂಡಮಾರುತ ದಿಂದ ಮುನ್ನೆಚ್ಚರಿಕೆ ಕ್ರಮಗಳಗಿ . ಒಡಿಶಾದಲ್ಲಿ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಿ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆಡಲಾಗಿದೆ.
ಇಂದು ಬೆಳಿಗ್ಗೆ 9 ಗಂಟೆಗೆ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಆರಂಭಗೊಳ್ಳಲಿವೆ. ವಿಮಾನ ನಿಲ್ದಾಣವನ್ನು ಬಂದ್ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ
Post a comment
Log in to write reviews