
ನೆಲಮಂಗಲ: ಭೀಕರ ರಸ್ತೆ ಅಪಘಾತದಲ್ಲಿ ಸೀಮಂತಕ್ಕೆ ಹೊರಟಿದ್ದ ತುಂಬು ಗರ್ಭಿಣಿ ಪತಿಯ ಕಣ್ಣೆದುರೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಎಡೆಹಳ್ಳಿ ಕ್ರಾಸ್ ಬಳಿ ನಡೆದಿದೆ ಎನ್ನಲಾಗಿದೆ.
ತಾಲ್ಲೂಕಿನ ತೋಟನಹಳ್ಳಿ ಗ್ರಾಮದ ನಿವಾಸಿ ಸಿಂಚನ ಎಂಬುವವರ ಸೀಮಂತ ಕಾರ್ಯವಿದ್ದು, ಈ ಹಿನ್ನೆಲೆಯಲ್ಲಿ ದಂಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಜಲ್ಲಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಣ್ಣೆದುರೇ ಪತ್ನಿ ಹಾಗೂ ಇನ್ನೂ ಕಣ್ಣುಬಿಡದ ಕಂದಮ್ಮ ಸತ್ತಿರುವುದನ್ನು ಕಂಡು ಪತಿಯ ಆಕ್ರಂದನ ಮುಗಿಲು ಮುಟ್ಟಿತ್ತು.ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸೀಮಂತದ ಸಂಭ್ರಮದಲ್ಲಿದ್ದ ಕುಟುಂಬ ಸದಸ್ಯರಿಗೆ ಈ ಒಂದು ದುರಂತ ಬರಸಿಡಿಲಿನಂತೆ ಅಪ್ಪಳಿಸಿದ್ದು, ಸೀಮಂತ ಮನೆ ಸೂತಕದ ಮನೆಯಾಗಿತ್ತು.
Poll (Public Option)

Post a comment
Log in to write reviews