
ಹಾವೇರಿ: ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ರಾಜ್ಯ ಸರಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಲಾರಿ ಚಾಲಕನ ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಬಗ್ಗೆ ತೋರುವ ನಿರ್ಲಕ್ಷ್ಯ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿ ಎಂದು ಬರೆದುಕೊಂಡಿದ್ದಾರೆ.
Poll (Public Option)

Post a comment
Log in to write reviews