
ಮೈಸೂರು: ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಅವರು ಕಿಡಿ ಕಾರಿದ್ದಾರೆ.ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ನೋಟಿಸ್ ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಸಿದ್ಧರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
Poll (Public Option)

Post a comment
Log in to write reviews