
ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಅಯ್ಕೆ ವಿಚಾರದ ಬಗ್ಗೆ ಕಳೆದ ವಾರ ನಾನು ಕುಮಾರಸ್ವಾಮಿ ಅವರಿಗೆ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್‌ನವರು ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಅದಕ್ಕೆ ಹೆಚ್.ಡಿ.ಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಆದರೆ ಅಧಿಕೃತ ಅನುಮೋದನೆ ಸಿಗಬೇಕು ಅಷ್ಟೇ. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಕುಮಾರಸ್ವಾಮಿ ಅವರೇ ಬಂದು ಹೆಸರು ಘೋಷಣೆ ಮಾಡಿ ಅಂತ ನಾನು ಕೇಳಿಕೊಂಡಿದ್ದೇನೆ. ಇದಕ್ಕೆ ಹೆಚ್.ಡಿ.ಕೆ ಕೂಡಾ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
Poll (Public Option)

Post a comment
Log in to write reviews