
ತಿರುಪತಿ ಲಡ್ಡು ಪ್ರಸಾದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ವಿಷಯ ಸದ್ಯ ದೇಶಾದ್ಯಂತ ಸಖತ್ ಚರ್ಚೆ ನಡೆದಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಿರುಪತಿ ಲಡ್ಡು ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ, ನಾನು ತಿರುಪತಿ ಲಡ್ಡುವನ್ನು ಸ್ವೀಕರಿಸುತ್ತೇನೆ. ನಾನಂತೂ ತಿರುಪತಿ ತಿಮ್ಮಪ್ಪನ ಲಡ್ಡು ತಿನ್ನುತ್ತೇನೆ ಎಂದಿದ್ದಾರೆ.
ಇನ್ನೂ ತಿರುಪತಿ ಲಡ್ಡುವಿನ ಕಲಬೆರಕೆ ಪ್ರಕರಣ ಹೊರಬಿದ್ದ ಬೆನ್ನಲ್ಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ವಿವಿಧ ದೇಗುಲಗಳಿಂದ ತುಪ್ಪದ ಮಾದರಿಯನ್ನು ಸಂಗ್ರಹಿಸಲಾಗಿದೆ. 250 ರಿಂದ 300 ತುಪ್ಪ ಮಾದರಿಯನ್ನು ಕಲೆಕ್ಟ್ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
Poll (Public Option)

Post a comment
Log in to write reviews