
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೂನ್ 1 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಇದು ಮಿತ್ರಪಕ್ಷಗಳ ನಾಯಕರಿಗೆ ದೊಡ್ಡ ಹೊಡೆತ ಎಂದು ಹೇಳಲಾಗುತ್ತಿದೆ.
ಪ್ರತಿಪಕ್ಷ 'ಇಂಡಿಯಾ' ಬಣದ ಎರಡನೇ ಅತಿದೊಡ್ಡ ಮಿತ್ರಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೂನ್ 1 ರಂದು ದೆಹಲಿಯಲ್ಲಿ ನಡೆಯಲಿರುವ ಮೈತ್ರಿಕೂಟದ ಸಭೆಗೆ ಗೈರುಹಾಜರಾಗಲಿದೆ ಎಂದು ಪಶ್ಚಿಮ ಬಂಗಾಳ ಮೂಲದ ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ.
ಸೋಮವಾರ ನಡೆದ ಲೋಕಸಭಾ ಚುನಾವಣಾ ಸಭೆಯಲ್ಲಿ ಮಾತನಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಜೂನ್ 1 ರಂದು ಇಂಡಿಯಾ ಸಭೆಯನ್ನು ಕರೆದಿದ್ದಾರೆ. ಆದರೆ ನಾನು ಸಭೆ ಸೇರಲು ಸಾಧ್ಯವಿಲ್ಲ ಎಂದು ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಜೂನ್ 1 ರಂದು ಒಂಬತ್ತು ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಮತ್ತೊಂದೆಡೆ, ನಮ್ಮ ರಾಜ್ಯ ಚಂಡಮಾರುತದಿಂದ ನಲುಗುತ್ತಿದೆ ಹಾಗಾಗಿ ನಾನು ಸಭೆಗೆ ಭಾಗವಹಿಸಲು ಸಾಧ್ಯವಾಗುವದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Poll (Public Option)

Post a comment
Log in to write reviews