ರಾಜ್ಯದಲ್ಲಿ ಚುನಾವಣೆ ಮಾಡಿದರೆ BJP 150 ಸ್ಥಾನ ಗೆಲ್ಲೋದು ಪಕ್ಕಾ ! ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬರಲಿ. ಈಗ ರಾಜ್ಯದಲ್ಲಿ ಚುನಾವಣೆ ನಡೆದರೂ ಬಿಜೆಪಿ ಪಕ್ಷ 140ರಿಂದ 150 ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಐತಿಹಾಸಿಕ ಗೆಲುವು ಸಾಧಿಸಿದೆ. ನೆಚ್ಚಿನ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ವರ್ಷದ ಹಿಂದೆಯಷ್ಟೇ ರಾಜ್ಯದಲ್ಲಿ 135 ಸ್ಥಾನ ಗೆದ್ದ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಸಿಎಂ - ಡಿಸಿಎಂ ಪ್ರತಿನಿಧಿಸುವ ಜಿಲ್ಲೆಗಳು ಸೇರಿದಂತೆ 17 ಸಚಿವರ ಸ್ವಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಹಿನ್ನಡೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರ ಯಾವ ರೀತಿ ಜನಪ್ರೀಯತೆ ಕಳೆದುಕೊಂಡಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದರು.
Poll (Public Option)

Post a comment
Log in to write reviews