
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗೆ ಆಗ್ತೀನಿ ಅಂತ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರು ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ನನಗೆ ಸಿಎಂ ಆಗುವ ಆಸೆ ಇದೆ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ. ಸದ್ಯಕ್ಕೆ ಬದಲಾವಣೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
Poll (Public Option)

Post a comment
Log in to write reviews