
ತುರುವೇಕೆರೆ: ಶ್ವಾನಗಳ ದಾಳಿಯಿಂದ ವೃದ್ಧೆ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕಿಡಿಕಾರಿದ್ದಾರೆ. ಈ ಘಟನೆ ನಡೆಯಲು ಜಿಲ್ಲಾಡಳಿತದ ನಿರ್ಲಕ್ಷವೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚಿಗೆ ಕಲ್ಲೂರು ಗ್ರಾಮದಲ್ಲಿ ಹುಚ್ಚು ನಾಯಿಯ ಕಡಿತಕ್ಕೆ ವೃದ್ಧೆ ಸೇರಿದಂತೆ ಮೂರು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಆದರೆ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ತಾಲೂಕಿನಲ್ಲಿ ನಾಯಿಗಳ ಕಾಟ ಜಾಸ್ತಿಯಾಗಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಕೂಡ ಸಿಗುತ್ತಿಲ್ಲ. ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.
ಮುಂದೆ ಇಂತಹ ಸಮಸ್ಯೆಗಳಿಂದ ಯಾರಾದರೂ ಸಾವನ್ನಪ್ಪಿದರೆ ಅವರ ಮೃತ ದೇಹವನ್ನು ಜಿಲ್ಲಾಧಿಕಾರಿಗಳ ನಿವಾಸದ ಮುಂಭಾಗ ಇಟ್ಟು ಪ್ರತಿಭಟನೆ ನಡೆಸುತ್ತೇವೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಎಚ್ಚರಿಕೆ ನೀಡಿದ್ದಾರೆ.
Poll (Public Option)

Post a comment
Log in to write reviews