ತನಿಖೆಯಲ್ಲಿ ನಿಯತ್ತಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ: ಬೊಮ್ಮಾಯಿ

ಹುಬ್ಬಳ್ಳಿ: ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಿದ್ರೆ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ ಎಂದು ಹೇಳಿದ್ದಾರೆ. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಈ ಪ್ರಕರಣ ಮರ್ಡರ್ ಆಗೋ ಮಟ್ಟಕ್ಕೆ ಹೋಗಿದೆ ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಶಿಗ್ಗಾಂವಿಗೆ ಉಪಚುನಾವಣೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಉಪಚುನಾವಣೆಯ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ. ನಾನಿನ್ನು ರಾಜೀನಾಮೆ ಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾಂವಿ ಕ್ಷೇತ್ರದ ಶಾಸಕನಾಗಿಯೇ ಇದ್ದೇನೆ. ನಾನು ರಾಜೀನಾಮೆ ಕೊಟ್ಟ ನಂತರ ಉಪಚುನಾವಣೆ ಪ್ರಕ್ರಿಯೆ ಶುರುವಾಗುತ್ತೆ ಎಂದು ಹೇಳಿದ್ದಾರೆ. ಮಗನಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ ಅವರು ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷ ಮಾಡೋ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews