2024-09-19 04:30:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜೈಲಿನಲ್ಲಿ ಅಕ್ರಮ ಚಟುವಟಿಕೆ ! ದಿಢೀರ್‌ ದಾಳಿಯಿಂದ ಗಾಂಜಾ, ಡ್ರಗ್ಸ್‌ ಸೇರಿ ಇನ್ನಿತರ ಸಾಮಗ್ರಿಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಮಂಗಳೂರು: ನಗರದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಇಂದು ನಸುಕಿನ ಜಾವ ಜೈಲಿನ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದರು.

ದಾಳಿಯಲ್ಲಿ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್‌ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಮತ್ತು ಗಾಂಜಾ ಹಾಗೂ ಇತರ ಡ್ರಗ್ಸ್​ಗಳ ಪ್ಯಾಕೆಟ್‌ಗಳನ್ನು ಜೈಲಿನಿಂದ ಪೊಲೀಸಲು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪ್ ಅಗರ್‌ವಾಲ್‌ ಮಾರ್ಗದರ್ಶನದಲ್ಲಿ ಪೊಲೀಸರು ನಸುಕಿನ ಜಾವ 4 ಗಂಟೆಗೆ ಕಾರ್ಯಾಚರಣೆಗೆ ಇಳಿದಿದ್ದರು. ಜೈಲಿನ ಎಲ್ಲಾ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಪೊಲೀಸ್ ಕಮೀಷನರ್ ಪ್ರತಿಕ್ರಿಯೆ: "ಜೈಲಿನೊಳಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಕಾರ್ಯಾಚರಣೆ ಮಾಡಲಾಗಿದೆ. ಈ ವಸ್ತುಗಳನ್ನು ಜೈಲಿಗೆ ಹೇಗೆ ತರಲಾಯಿತು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ" ಎಂದು ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯಿಸಿದ್ದಾರೆ.

Post a comment

No Reviews