
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮೂವರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ. ಹಾಗೆಯೇ ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಪ್ರಯಾಣಿಕರನ್ನ ತಪಾಸಣೆ ಮಾಡುವ ವೇಳೆ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮರೆಮಾಚಿ ಚಿನ್ನವನ್ನು ಸಾಗಿಸುತ್ತಿದ್ದ ಮೂರು ಪ್ರಕರಣಗಳನ್ನ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮೊದಲ ಪ್ರಕರಣದಲ್ಲಿ ಪ್ರಯಾಣಿಕನೋರ್ವನಿಂದ 18.83 ಲಕ್ಷ ರೂ. ಮೌಲ್ಯದ 271 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಎರಡನೇ ಪ್ರಕರಣದಲ್ಲಿ ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನ ಸಾಗಿಸುತ್ತಿದ್ದಾಗ ಮತ್ತೋರ್ವನಿಂದ 37.96 ಲಕ್ಷ ರೂಪಾಯಿ ಮೌಲ್ಯದ 538.5 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.
ಮೂರನೇ ಪ್ರಕರಣದಲ್ಲಿ ಇನ್ನೋರ್ವನಿಂದ 14.93 ಲಕ್ಷ ಮೌಲ್ಯದ 211 ಗ್ರಾಂ ಚಿನ್ನ ವಶಕ್ಕೆ ಮಾಡಲಾಗಿದೆ.
Poll (Public Option)

Post a comment
Log in to write reviews