ಬೀದರ್ : ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ಮಾಡಿದ್ದು, ಸುಮಾರು 898ಕೆ.ಜಿ ಗೂ ಅಧಿಕ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಹೊಸಕನಳ್ಳಿ ಗ್ರಾಮದ ವ್ಯಕ್ತಿಯೊಬ್ಬನ ಮನೆಯಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ಇಬ್ಬರು ಆರೋಪಿಗಳನ್ನು ಹಾಗೂ ಒಂದು ಟಿವಿಎಸ್ ಮೋಟಾರ್ ಸೈಕಲ್ ಸೇರಿದಂತೆ ಹಲವು ಸಾಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಅಯ್ಯಪ್ಪ, ಫುಡ್ ಇನ್ಸ್ಪೆಕ್ಟರ್ ಬಿಂದುಕುಮಾರಿ ಉಪಸ್ಥಿತರಿದ್ದರು.
Post a comment
Log in to write reviews