
ತುಮಕೂರು: ಅಕ್ರಮವಾಗಿ ರಕ್ತಚಂದನದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಖದೀಮರು ಸಿಕ್ಕಿಬಿದ್ದಿದ್ದಾರೆ. ವಾಹನ ತಪಾಸಣೆ ವೇಳೆ ಬರೋಬ್ಬರಿ 1 ಕೋಟಿ ರೂ. ಮೌಲ್ಯದ ರಕ್ತಚಂದನವನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ತುಮಕೂರಿನ ಹಿರೇಹಳ್ಳಿ ಇಂಡಸ್ಟ್ರಿಯಲ್ ಏರಿಯಾ ಬಳಿ ನಡೆದಿದೆ.
ಆಂಧ್ರದಿಂದ ತುಮಕೂರಿಗೆ ರಕ್ತಚಂದನವನ್ನು ಸಾಗಾಟ ಮಾಡಲಾಗುತ್ತಿತ್ತು. ಮಾರ್ಗದಲ್ಲಿ ವಾಹನ ತಪಾಸಣೆ ವೇಳೆ ಚಾಲಕ ಹಾಗೂ ಮತ್ತೊಬ್ಬ ಆರೋಪಿ ವಾಹನ ಬಿಟ್ಟು ಪರಾರಿಯಾಗಿದ್ದರು. ಆದರೂ ಬಿಡದೇ ಬೆನ್ನಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ ಕೇಶವಮೂರ್ತಿ, ಚರಂಡಿಯಲ್ಲಿ ಅವಿತು ಕುಳಿತಿದ್ದ ಚಾಲಕ ಇಬ್ರಾಹಿಂನನ್ನು ಹಿಡಿದಿದ್ದಾರೆ.
ವಾಹನದಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸಿಎಫ್ ಮಹೇಶ್ ಮಾಲಗತ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಚಂದನವನ್ನು ವಶಕ್ಕೆ ಪಡೆದು ತುಮಕೂರು ವಲಯ ಅರಣ್ಯ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
Poll (Public Option)

Post a comment
Log in to write reviews