
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಇಲಾಖೆಯಿಂದ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ವಾಹನ ಸವಾರರ ಮನವಿಗೆ ಓಗೊಟ್ಟಿದ್ದ ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. ಈಗ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಣೆಗೆ ಸರ್ಕಾರ ನಿರಾಸಕ್ತಿ ತೋರಿದ್ದು, ಜೂನ್ ತಿಂಗಳಿಂದ ದಂಡ ವಸೂಲಿ ಮಾಡಲು ನಿರ್ಧರಿಸಿದೆ.
ರಾಜ್ಯದ ವಾಹನ ಸವಾರರು ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಆಸಕ್ತಿ ತೋರಿಸುತ್ತಿಲ್ಲ. ಏಪ್ರಿಲ್ 2019 ಕ್ಕಿಂತ ಮೊದಲು ರಾಜ್ಯದಲ್ಲಿ ನೋಂದಣಿ ಮಾಡಿಕೊಂಡ ಎಲ್ಲ ದ್ವಿಚಕ್ರ, ತ್ರಿಚಕ್ರ ವಾಹನಗಳು, ಕಾರುಗಳು, ಲಘು, ಮಧ್ಯಮ ಮತ್ತು ಭಾರಿ ವಾಹನಗಳಿಗೆ ಈ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ನಿಯಮ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ 34 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲಾಗಿದೆ. ಈಗ ಮೇ 31 ರೊಳಗೆ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದ್ದ, 21 ದಿನವಷ್ಟೇ ಬಾಕಿಯಿದೆ. ಹೀಗಿರುವಾಗ, ಇನ್ನೂ 1.56 ಕೋಟಿ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವುದು ಬಾಕಿಯಿದೆ.
Poll (Public Option)

Post a comment
Log in to write reviews