
ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಎದುರಾಗಿದೆ. ಮುಡಾ ಕೇಸ್‌ನಲ್ಲಿ ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ ಕೇಸ್‌ನಲ್ಲಿ ಈಗಾಗಲೇ ಎ2, 23 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ ಇರುವುದು ಎ1 ಆರೋಪಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಮಾತ್ರ.
ಸಿಎಂಗೆ ನೋಟಿಸ್ ನೀಡಲು ಲೋಕಾಯುಕ್ತ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪತ್ನಿ ಪಾರ್ವತಮ್ಮ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದಾರೆ. ಟಿಪ್ಪಣಿ ಕಾರ್ಯ ಮುಗಿದ ಮೇಲೆ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಮುಡಾ ಹಗರಣ ಆರೋಪ ಸಂಬಂಧ ಲೋಕಾಯುಕ್ತ ದಾಖಲಿಸಿರುವ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದಾರೆ. ಮುಡಾ ಪ್ರಕರಣದಲ್ಲಿ ಸುಮಾರು 3 ಗಂಟೆಗಳ ಕಾಲ ಸಿಎಂ ಪತ್ನಿಯನ್ನು ಲೋಕಾಯುಕ್ತ ವಿಚಾರಣೆ ನಡೆಸಿತು.
Poll (Public Option)

Post a comment
Log in to write reviews