ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿಶೇಷ ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕವಾಯತು ನಡೆಯುವ ಮೈದಾನದ ಸುತ್ತಮುತ್ತ ಪೊಲೀಸರು ವಿಶೇಷ ಭದ್ರತೆ ವಹಿಸಿದ್ದಾರೆ. ಬೆಳಿಗ್ಗೆಯಿಂದಲೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಮೈದಾನದ ಇಂಚಿಂಚೂ ಸಹ ತಪಾಸಣೆ ನಡೆಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ 10 ಮಂದಿ ಡಿಸಿಪಿ, 17 ಎಸಿಪಿ, 42 ಇನ್ಸ್‌ಪೆಕ್ಟರ್, 112 ಸಬ್ ಇನ್ಸ್‌ಪೆಕ್ಟರ್, 62 ಸಹಾಯಕ ಸಬ್ ಇನ್ಸ್‌ಪೆಕ್ಟರ್, 511 ಕಾನ್ಸ್‌ಟೇಬಲ್, 72 ಮಹಿಳಾ ಸಿಬ್ಬಂದಿ, 129 ಸಾದಾ ಉಡುಪಿನ ಅಧಿಕಾರಿಗಳು ಮತ್ತು ಸಿಬ್ಬಂದಿ, 27 ಜನ ಕ್ಯಾಮರಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಂಚಾರ ವ್ಯವಸ್ಥೆ ನಿರ್ವಹಣೆಗಾಗಿ 3 ಜನ ಡಿಸಿಪಿ, 6 ಎಸಿಪಿ, 19 ಇನ್ಸ್‌ಪೆಕ್ಟರ್, 32 ಸಬ್ ಇನ್ಸ್‌ಪೆಕ್ಟರ್, 111 ಸಹಾಯಕ ಸಬ್ ಇನ್ಸ್‌ಪೆಕ್ಟರ್, 430 ಕಾನ್ಸ್‌ಟೇಬಲ್ ಸೇರಿದಂತೆ ಒಟ್ಟು 1583 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
Poll (Public Option)

Post a comment
Log in to write reviews