2024-12-24 05:52:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಪ್ರಸ್ತುತ ಭಾರತ 2ನೇ ಸ್ಥಾನ

ಮೈಸೂರು: 2023-24ರಲ್ಲಿ ಭಾರತ ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಶೇ.42ರಷ್ಟು ಪಾಲು ಹೊಂದಿದ್ದು, 2028 ಕೋಟಿ ರೂ ಮೌಲ್ಯದ ರೇಷ್ಮೆ ರಪ್ತು ಮಾಡಲಾಗಿದೆ. ಈ ಮೂಲಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಪ್ರಸ್ತುತ ಭಾರತ 2ನೇ ಸ್ಥಾನದಲ್ಲಿದೆ. ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ಪಿ.ಶಿವಕುಮಾರ್ರವರು 2074ರ ವೇಳೆಗೆ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ನಗರದ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಹಿಪ್ಪು ನೇರಳೆಯನ್ನು 2.63 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಕಚ್ಚಾ ರೇಷ್ಮೆ ಪ್ರಮಾಣವೂ ಏರಿಕೆಯಾಗಿದೆ. ದೇಶಾದ್ಯಂತ 1948ರಲ್ಲಿ ಆರಂಭವಾದ ಕೇಂದ್ರ ರೇಷ್ಮೆ ಮಂಡಳಿಯಡಿ 159 ಘಟಕಗಳಿದ್ದು, 9 ಸಂಶೋಧನಾ ಸಂಸ್ಥೆಗಳು ವಿವಿಧ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಉತ್ಪಾದನೆಯಾಗುತ್ತಿದೆ ಎಂದರು.

ಕಚ್ಚಾ ರೇಷ್ಮೆಯನ್ನು ಚೀನಾದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೀಗ ಇದರ ಪ್ರಮಾಣ ಇಳಿಕೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ 2022-23 ಹೊರತುಪಡಿಸಿದರೆ ಹೆಚ್ಚು ಆಮದು ಮಾಡಿಕೊಂಡಿಲ್ಲ. ಸುಮಾರು 950 ಮೆಟ್ರಿಕ್ ಟನ್ ರೇಷ್ಮೆ ಗೂಡನ್ನು ಭಾರತದಿಂದಲೇ ರಫ್ತು ಮಾಡಲಾಗಿದೆ. ರೇಷ್ಮೆ ಕೇವಲ ಬಟ್ಟೆ ತಯಾರಿಕೆಗೆ ಮಾತ್ರವಲ್ಲದೆ ಆಹಾರ, ಔಷಧ, ಸೌಂದರ್ಯವರ್ಧಕಗಳ ತಯಾರಿಕೆಗೂ ಬಳಕೆಯಾಗುತ್ತಿದೆ. ಸಕ್ಕರೆ ಕಾಯಿಲೆಗೆ ಔಷಧಿ ತಯಾರಿಕೆಗೆ ಹಿಪ್ಪುನೇರಳೆ ಎಲೆಗಳನ್ನು ಬಳಸಲಾಗುತ್ತದೆ. ಇದರಿಂದಾಗಿ ರೈತರಿಗೆ ಹೆಚ್ಚು ಲಾಭವಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ತರಬೇತಿಯನ್ನು ರೇಷ್ಮೆ ಬೆಳೆಗಾರರಿಗೆ ನೀಡಲಾಗುತ್ತಿದ್ದು, ಸ್ಟಾರ್ಟ್‌ಅಪ್ ಆರಂಭಿಸಲು ರೇಷ್ಮೆ ಉಪ ಉತ್ಪನ್ನ ಮಾಡುವವರಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೃಷಿ ಪ್ರದೇಶ ಇಳಿಕೆ, ವಾಣಿಜ್ಯ ಬೆಳೆಗಳ ಪೈಪೋಟಿ, ಯುವಕರ ಬದಲಾದ ಆಸಕ್ತಿಯಿಂದಾಗಿ ರೇಷ್ಮೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿದ್ದು, ಇದರಲ್ಲಿ ರಿಯಲ್ ಎಸ್ಟೇಟ್ ಪಾತ್ರವೂ ಇದೆ ಎನ್ನಲಾಗಿದೆ. ರೇಷ್ಮೆ ಉತ್ಪಾದನೆ ಕೋವಿಡ್‌ನಿಂದಾಗಿಯೂ ಕುಂಠಿತವಾಗಿತ್ತು. ಕಳೆದ ಎರಡು ಮೂರು ವರ್ಷಗಳಿಂದ ಚೇತರಿಕೆಯಾಗಿದೆ ಎಂದು ತಿಳಿಸಿದರು.

ಸೆ.20ರಂದು ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಕೇಂದ್ರ ರೇಷ್ಮೆ ಮಂಡಳಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಭಾರಿ ಕೈಗಾರಿಕೆ, ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜವಳಿ ಖಾತೆ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟ, ವಿದೇಶಾಂಗ ವ್ಯವಹಾರ, ರೈಲ್ವೆ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಟಿಎಸ್‌ಎಸ್‌ಒ ನಿರ್ದೇಶಕ ಡಾ.ಸೆಲ್ವಕುಮಾರ್, ಸಿಟಿಆರ್‌ಟಿಐ ನಿರ್ದೇಶಕ ಎನ್.ಬಿ.ಚೌದರಿ, ಎಂಇಎಸ್‌ಎಸ್‌ಒ ನಿರ್ದೇಶಕ ಡಾ.ಎನ್.ಕೆ.ಭಾಟಿಯ, ಸಿಎಸ್‌ಆರ್‌ಟಿಐ ನಿರ್ದೇಶಕ ಡಾ.ಗಾಂಧಿ ದಾಸ್ ಇದ್ದರು.


Post a comment

No Reviews