
ನ್ಯೂಯಾರ್ಕ್: 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ 12-06-2024 ರಂದು ಅಮೆರಿಕ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೂಪರ್ - 8 ಹಂತಕ್ಕೆ ತಲುಪಿದೆ.
ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ ನಷ್ಟಕ್ಕೆ 110 ರನ್ ಕಲೆಹಾಕಿತ್ತು.
ಭಾರತ ತಂಡದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ 18.2 ಓವರ್‌ಗಳಲ್ಲಿ 111 ರನ್ ಗಳಿಸಿ ಜಯಭೇರಿ ಬಾರಿಸಿತು.
ಈ ಪಂದ್ಯಾವಳಿಯಲ್ಲಿ ಆಡಿದ ಮೂರಕ್ಕೆ ಮೂರು ಪಂದ್ಯಗಳಲ್ಲಿ ಗೆಲ್ಲುವ ಸಾಧಿಸುವ ಮೂಲಕ ಭಾರತ 6 ಅಂಕಗಳೊಂದಿಗೆ ಎ ಗುಂಪಿನ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಭಾರತದ ವಿರುದ್ಧ ಸೂಲುವ ಮೂಲಕ ಅಮೆರಿಕ ತಂಡ ಎರಡನೇ ಸ್ಥಾನದಲ್ಲಿದೆ.
ಭಾರತದ ಪರ ವಿರಾಟ್ ಕೊಹ್ಲಿ ಯಾವುದೇ ರನ್ ಗಳಿಸದೆ ಔಟಾದರೆ, ನಾಯಕ ರೋಹಿತ್ ಶರ್ಮಾ ಕೇವಲ 3 ರನ್‌ಗಳಿಸಿ ಫೆವಿಲಿಯನ್ ಸೇರಿದರು. ನಂತರ ಬಂದ ರಿಷಬ್ ಪಂಥ್ 20 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 18 ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.
ಆಗ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಜೋಡಿ 72 ರನ್‌ಗಳ ಜೊತೆಯಾಟದ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದರು.
Poll (Public Option)

Post a comment
Log in to write reviews