
ಗ್ವಾಲಿಯರ್: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಟೆಸ್ಟ್ ಸರಣಿಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಭಾರತ ತಂಡ ಈಗ ಬಾಂಗ್ಲಾದೇಶ ವಿರುದ್ಧ ಟಿ20 ಕದನಕ್ಕೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ (06-10-2024) ನಡೆಯಲಿದ್ದು, ಗ್ವಾಲಿಯರ್‌ನ ಹೊಸ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.
ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಡಿದ್ದ ಯಾವುದೇ ಆಟಗಾರ ಭಾರತ ಟಿ20 ಸರಣಿಯಲ್ಲಿಲ್ಲ. ಸೂರ್ಯಕುಮಾರ್ ಯಾದವ್ ತಂಡದ ನಾಯಕತ್ವ ನಡೆಸಲಿದ್ದು, ಐಪಿಎಲ್ ಸ್ಟಾರ್‌ಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಕಾಯುತ್ತಿದ್ದಾರೆ. ಪ್ರಮುಖವಾಗಿ ಎಕ್ಸ್‌ಪ್ರೆಸ್ ವೇಗಿ ಖ್ಯಾತಿಯ ಮಯಾಂಕ್ ಯಾದವ್ ಮೇಲೆ ಭಾರಿ ನಿರೀಕ್ಷೆ ಇಡಲಾಗಿದೆ. ಅವರ ಜೊತೆಗೆ ಮತ್ತೋರ್ವ ಯುವ ವೇಗಿ ಹರ್ಷಿತ್ ರಾಣಾ, ಆಲ್ರೌಂಡರ್ ನಿತೀಶ್ ಕುಮಾರ್ ಕೂಡಾ ಪಾದಾರ್ಪಣೆ ನಿರೀಕ್ಷೆಯಲ್ಲಿದ್ದಾರೆ.
Poll (Public Option)

Post a comment
Log in to write reviews