ಭಾರತ
ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯನ್ನು 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆಸುವುದಾಗಿ ಘೋಷಣೆ ಮಾಡಿದೆ.

ಜಮ್ಮು & ಕಾಶ್ಮೀರ :ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯನ್ನು 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆಸುವುದಾಗಿ ಘೋಷಣೆ ಮಾಡಿದೆ. ಸೆಪ್ಟೆಂಬರ್ 18ರಂದು, ಸೆಪ್ಟೆಂಬರ್ 25, ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಘೋಷಣೆ ಮಾಡಿದೆ. ಇನ್ನು ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.
ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಲಾಗಿತ್ತು. ಆಗಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.
ಜಮ್ಮು-ಕಾಶ್ಮೀರಾದಲ್ಲಿ ಒಟ್ಟು 87.09 ಲಕ್ಷ ಜನ ಮತದಾರರಿದ್ದರೆ, ಮತಗಟ್ಟೆಗಳ ಸಂಖ್ಯೆ 11,838 ಇವೆ. ಇನ್ನು 3.71 ಲಕ್ಷ ಜನ ಮೊದಲ ಬಾರಿ ಮತದಾನ ಮಾಡುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews