2024-09-19 04:42:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ ಹಾಕಿ ತಂಡ

ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವೆ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಹೈವೋಲ್ಟೇಜ್ ಪಂದ್ಯ ಇಂದು ನಡೆದಿದ್ದು, ಈ ಪಂದ್ಯದಲ್ಲಿ ತನ್ನ ಚಾಂಪಿಯನ್ ಆಟವನ್ನು ಮುಂದುವರೆಸಿದ ಹರ್ಮನ್​ಪ್ರೀತ್ ನಾಯಕತ್ವದ ಭಾರತ ಹಾಕಿ ತಂಡ, ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಮಣಿಸಿ ಸತತ ಐದನೇ ಜಯ ದಾಖಲಿಸಿತು. ಇದರೊಂದಿಗೆ ಭಾರತ ಹಾಕಿ ತಂಡ ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಚೀನಾದಲ್ಲಿ ನಡೆಯುತ್ತಿರುವ ಈ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿ ಸತತ ಐದನೇ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಪೆನಾಲ್ಟಿ ಕಾರ್ನರ್ ಮೂಲಕ 2 ಗೋಲು ಗಳಿಸಿದ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರೆ, ಆರಂಭದಲ್ಲೇ ಗೋಲು ದಾಖಲಿಸಿ ಭಾರತಕ್ಕೆ ತಿರುಗೇಟು ನೀಡಿದ್ದ ಪಾಕಿಸ್ತಾನ ಪಂದ್ಯವನ್ನು 2-1 ಅಂತರದಿಂದ ಕಳೆದುಕೊಂಡಿತು.


Post a comment

No Reviews