
ಅಮೃತಸರ: ಐಐಎಂ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ, ಗ್ರಂಥಾಲಯದಲ್ಲಿನ ಟೇಬಲ್‌ಗಳ ಮೇಲೆ ಮಲಗಿ ವಿನೂತನವಾಗಿ ಪ್ರತಿಭಟಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಅಮೃತಸರವು ಸ್ಥಿರವಾಗಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಹೊಂದಿದ್ದು ಬಿಸಿಲಿನ ತೀವ್ರತೆ ತಡೆಯಲಾಗದೇ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಹಾಸ್ಟೆನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿಗಳ ಬೇಡಿಕೆಗೆ ಆಡಳಿತ ಮಂಡಳಿ ಇನ್ನೂ ಸ್ಪಂದಿಸಿಲ್ಲ ಎನ್ನಲಾಗಿದೆ.
Poll (Public Option)

Post a comment
Log in to write reviews