
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಮರು ಸೇರ್ಪಡೆಗೊಂಡಿದ್ದಾರೆ.
ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ನಂತರ ಮತ್ತೆ ಗಿರೀಶ್ ನಾಯ್ಕ್ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
Poll (Public Option)

Post a comment
Log in to write reviews