
ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕಳೆದ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೇರಿದಂತೆ ಮಂಗಳೂರು ನಗರದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಕೃ಼ಷಿ ಗರಿಗೆದರಲಿದ್ದು, ಕೃಷಿಕರ ಮೊಗದಲ್ಲಿ ಸಂತಸ ಮೂಡಿದೆ.
ಹವಾಮಾನ ಇಲಾಖೆ ಜೂನ್ 15 ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ನೀಡಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲೂ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ. ಇತ್ತ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಳ್ಳಾಲ ಕಡಲ ತೀರದಲ್ಲಿ ಕಡಲ್ಕೊರೆತದ ಭೀತಿ ಸಹ ಎದುರಾಗಿದೆ.
Poll (Public Option)

Post a comment
Log in to write reviews