2024-09-19 04:36:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇನ್ಸಟಾಗ್ರಾಮ್‌ನಲ್ಲಿ ಪರಿಚಯ: ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಉಡುಪಿ (ಆ.24): ಕೊಲ್ಕತ್ತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಉಡುಪಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆಯು ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕರು ಒರ್ವ ಹಿಂದೂ ಯುವತಿಯನ್ನ ನಿರ್ಜನ ಸ್ಥಳಕ್ಕೆ ಕರೆಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗದ್ದು. ಯುವತಿ ಹೇಳಿಕೆ ಆದರಿಸಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಲ್ತಾಫ್ ಸಂತ್ರಸ್ತ ಯುವತಿಯನ್ನ ಇನ್ಸಟಾಗ್ರಾಮ್‌ನಲ್ಲಿ ಪರಿಚಯಸಿಕೊಂಡಿದ್ದ. ಪರಿಚಯ ಸಲುಗೆ ಬೆಳೆದು ಭೇಟಿ ಮಾಡುವಂತೆ ಯುವತಿಗೆ ಪುಸಲಾಯಿಸಿ ಶುಕ್ರವಾರ ಮಧ್ಯಾಹ್ನ ಸ್ಥಳಕ್ಕೆ ಕರೆಸಿಕೊಂಡಿದ್ದ ಅಲ್ತಾಫ್. ಬಳಿಕ ತನ್ನ ಇಬ್ಬರು ಸ್ನೇಹಿತರ ನೆರವಿನಿಂದ ಬಿಯರ್ ಬಾಟಲಿ ಕೂಡ ತರಿಸಿಕೊಂಡಿರುವ ಆರೋಪಿ. ಯುವತಿಗೆ ಗೊತ್ತಾಗದಹಾಗೆ ಬಿಯರ್ ಬಾಟಲಿಯಲ್ಲಿ ಮಾದಕ ವಸ್ತು ಪದಾರ್ಥ ಬೆರೆಸಿ ಅತ್ಯಾಚಾರ ಮಾಡಲಾಗಿದೆ. ಸ್ನೇಹಿತರು ಸೇರಿ ಮೂವರು ಯುವತಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ.

ಹಿಂದೂ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಕುರಿತಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ ಮಾತನಾಡಿದ್ದು, ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ ಆರೋಪಿ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ. ಸದ್ಯ ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ್ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Post a comment

No Reviews