
ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ - ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
Poll (Public Option)

Post a comment
Log in to write reviews