ಗ್ಯಾರಂಟಿಗಾಗಿ ಸರ್ಕಾರಿ ಭೂಮಿ ಮಾರಲು ಮುಂದಾಯ್ತಾ ಕಾಂಗ್ರೆಸ್ ಸರ್ಕಾರ..? ಹೊಸ ವಿವಾದ

ಬೆಂಗಳೂರು : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಸರ್ಕಾರ ಅನೇಕ ಕಸರತ್ತುಗಳನ್ನು ಮಾಡುತ್ತಿದೆ. ಇದೀಗ ಗ್ಯಾರಂಟಿಗಳಿಂದ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಕಾಂಗ್ರೆಸ್ ಸರ್ಕಾರ ಹೊಸ ದಾರಿ ಹುಡುಕಿದೆ.
ಈಗಾಗಲೇ ತೈಲಬೆಲೆ ದರ ಹೆಚ್ಚಿಸಿರುವ ಸರ್ಕಾರ ಇದೀಗ ಬೆಂಗಳೂರು ಸುತ್ತಲಿನರುವ 25 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಆದಾಯ ಸಂಗ್ರಹಕ್ಕೆ ಬಳಸಿಕೊಳ್ಳಲು ಮುಂದಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಜಮೀನುಗಳ ನಗದೀಕರಣ ಅಥವಾ ರಾಜ್ಯ ನಿರ್ದೇಶಿತ ನಗರೀಕರಣ ಮಾದರಿಗಳ ಮೂಲಕ ಆದಾಯ ಸಂಗ್ರಹಿಸಬಹುದು ಎಂದು ಬಾಸ್ಟನ್ ಎಂಬ ಕಂಪನಿ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ನಾವು ಸರ್ಕಾರಿ ಭೂಮಿಯನ್ನು ಅಡಮಾನ ಇಡುತ್ತಿಲ್ಲ. ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡಲು ಈ ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.
ಈ ಮಧ್ಯೆ ಶೀಘ್ರದಲ್ಲೇ ಬೆಂಗಳೂರಲ್ಲಿ ನೀರಿನ ದರ ಹೆಚ್ಚಿಸಲು ಸರ್ಕಾರ ಸಿದ್ದತೆ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯ ಸರ್ಕಾರ ಈ ಬೆಲೆ ಹೆಚ್ಚಳ ಕ್ರಮಗಳನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಗಳನ್ನು ಮುಂದುವರಿಸಿದೆ. ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
Poll (Public Option)

Post a comment
Log in to write reviews