
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಲ್ಲಿರುವ A-2 ಆರೋಪಿ ದರ್ಶನ್ ಬೇಲ್ ಭವಿಷ್ಯ ಇಂದು ನಿರ್ಧಾರವಾಗಿದ್ದು, ಸಲ್ಲಿಸಿದ್ದ ಜಾಮೀನು ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಪವಿತ್ರಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಇತ್ತು. ಇದೇ ಕಾರಣಕ್ಕೆ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್ ಕಳೆದ ಜೂನ್ನಲ್ಲಿ ಅಪಹರಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿತ್ತು. ಈ ವೇಳೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ್ದ ಮಾರಣಾಂತಿಕ ಹಲ್ಲೆಗೆ ರೇಣುಕಾಸ್ವಾಮಿ ಜೀವ ಕಳೆದುಕೊಂಡಿದ್ದರು ಎಂಬ ಆರೋಪ ಇತ್ತು. ಇದರ ತನಿಖೆ ನಡೆಸಿದ್ದ ಬೆಂಗಳೂರು ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು, 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಬೆಂಗಳೂರಿನ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದು, ಮತ್ತೆ ನಟ ದರ್ಶನ್‌ಗೆ ಜೈಲು ವಾಸ ಮುಂದುವರೆದಿದೆ.
Poll (Public Option)

Post a comment
Log in to write reviews